Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯಕ್ಕೆ ಮತ್ತೆ ಮಳೆ ಕಾಟ

ಭಾರತ-ಇಂಗ್ಲೆಂಡ್ ಕ್ರಿಕೆಟ್
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮಳೆ ಅಡ್ಡಿಯಾಗಿದೆ. ಲಾರ್ಡ್ಸ್ ಅಂಗಣದಲ್ಲಿ ನಡೆಯುತ್ತಿರುವ ಪಂದ್ಯ ಮಳೆಯಿಂದಾಗಿ ಈಗ ಸ್ಥಗಿತಗೊಂಡಿದೆ.


ಮೊದಲ ದಿನವಾದ ಇಂದು ಟಾಸ್ ಸೋತ ಟೀಂ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದೆ. 18.4 ಓವರ್ ಗಳ ಆಟ ನಡೆದಿದ್ದು, ಭಾರತ ವಿಕೆಟ್ ನಷ್ಟವಿಲ್ಲದೇ 46 ರನ್ ಗಳಿಸಿದೆ. ರೋಹಿತ್ ಶರ್ಮಾ 35 ಮತ್ತು ಕೆಎಲ್ ರಾಹುಲ್ 10 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಷ್ಟರಲ್ಲಿ ಮಳೆ ಶುರುವಾಗಿದ್ದು ಸದ್ಯಕ್ಕೆ ಆಟ ಸ್ಥಗಿತಗೊಂಡಿದೆ.

ಮೊದಲ ಪಂದ್ಯವೂ ಮಳೆಯಿಂದಾಗಿ ಡ್ರಾಗೊಂಡಿತ್ತು. ಇದಕ್ಕೆ ಮೊದಲು ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯವೂ ಮಳೆಗೆ ಆಹುತಿಯಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಟಾಸ್ ಸೋಲುವುದರಲ್ಲಿ ವಿರಾಟ್ ಕೊಹ್ಲಿಗೆ ಅವಾರ್ಡ್ ಕೊಡಬೇಕು!