ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮಹಿಳೆಯರ ಟೆಸ್ಟ್ ಪಂದ್ಯವನ್ನು ಭಾರತ ತಂಡ ಭರ್ಜರಿಯಾಗಿ 347 ರನ್ ಗಳಿಂದ ಗೆದ್ದುಕೊಂಡಿದೆ.
ಮೊದಲ ಇನಿಂಗ್ಸ್ ನಲ್ಲಿ ಭಾರತ 428 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ಬ್ಯಾಟಿಂಗ್ ಭಾರತದ ಬೌಲಿಂಗ್ ಎದುರು ಕುಸಿದು ಕೇವಲ 136 ರನ್ ಗಳಿಗೆ ಆಲೌಟ್ ಆಗಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.
ಗೆಲುವಿಗೆ 478 ರನ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ಕೇವಲ 131 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಬರೋಬ್ಬರಿ 347 ಗಳ ಭಾರೀ ಅಂತರದ ಸೋಲು ಅನುಭವಿಸಿತು.
ಭಾರತ ಮತ್ತು ಇಂಗ್ಲೆಂಡ್ ನಡುವೆ 18 ವರ್ಷಗಳ ನಂತರ ನಡೆದ ಏಕೈಕ ಟೆಸ್ಟ್ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಭಾರತ ಅದ್ಭುತ ಪ್ರದರ್ಶನ ತೋರಿತ್ತು. ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಮತ್ತು ಎರಡನೇ ಇನಿಂಗ್ಸ್ ನಲ್ಲಿ 4 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.