ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ಇಲೆವೆನ್ ನಡುವೆ ನಡೆದ ಅಭ್ಯಾಸ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಬ್ಯಾಟ್ಸ್ ಮನ್ ಗಳು ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ.
ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ನಿನ್ನೆಯ ದಿನಕ್ಕೆ 59 ರನ್ ಗೆ ವಿಕೆಟ್ ನಷ್ಟವಿಲ್ಲದೇ ದಿನದಾಟ ಮುಗಿಸಿದ್ದ ಭಾರತ ಇಂದು ಸರಿಯಾಗಿಯೇ ಸಿಕ್ಕ ಅವಕಾಶ ಬಳಸಿಕೊಂಡಿತು.
ಮಯಾಂಕ್ ಅಗರ್ವಾಲ್ 81 ರನ್ ಗಳಿಸಿದರೆ ರಿಷಬ್ ಪಂತ್ 70, ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅಜೇಯ 30, ರವಿಚಂದ್ರನ್ ಅಶ್ವಿನ್ ಅಜೇಯ 16 ರನ್ ಗಳಿಸಿದರು. ಪೃಥ್ವಿ ಶಾ 39 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ ಶಬ್ನಂ ಗಿಲ್ ದ್ವಿತೀಯ ಇನಿಂಗ್ಸ್ ನಲ್ಲೂ ಕೇವಲ 8 ರನ್ ಗೆ ವಿಕೆಟ್ ಒಪ್ಪಿಸಿದರು.