Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸ್ಮೃತಿ ಮಂದಾನ ಶತಕ: ಹಲವು ದಾಖಲೆಗಳು ಉಡೀಸ್‌

Smriti Mandana

Sampriya

ಬೆಂಗಳೂರು , ಭಾನುವಾರ, 16 ಜೂನ್ 2024 (18:59 IST)
Photo Courtesy X
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದಾನ ಆರನೇ ಶತಕ ಸಿಡಿಸಿದ್ದಾರೆ. ಈ ಮೂಲಕ ಹಲವು ದಾಖಲೆ ನಿರ್ಮಿಸಿದ್ದಾರೆ.

ಮಹಿಳೆಯರ ಏಕದಿನ ಕ್ರಿಕೆಟ್​​ನಲ್ಲಿ ಆರನೇ ಶತಕ ಸಿಡಿಸಿದ ಸ್ಮೃತಿ ಮಂದಾನ, ಇದೇ ಮೊದಲ ಬಾರಿಗೆ ತವರಿನ ಮೈದಾನದಲ್ಲಿ ಶತಕ ಸಿಡಿಸಿದ್ದಾರೆ. ಹರ್ಮನ್​ಪ್ರೀತ್ ಕೌರ್ ದಾಖಲೆಯನ್ನೂ ಮುರಿದಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಎಡಗೈ ಬ್ಯಾಟ್ಸ್‌ಮನ್ ಸ್ಮೃತಿ ಮಂದಾನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7000 ರನ್ ಗಡಿ ದಾಟಿ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. 59 ರನ್ ಗಳಿಸಿದಾಗ ಈ ದಾಖಲೆ ಬರೆದರು.

 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಥಾಲಿ ರಾಜ್ ಬಳಿಕ 7000 ರನ್‌ಗಳ ಗಡಿ ದಾಟಿದ ಭಾರತದ ಮಹಿಳಾ ತಂಡದ ಎರಡನೇ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. ಮಿಥಾಲಿ 10868 ರನ್ ಸಿಡಿಸಿದ್ದಾರೆ.

ಇದಲ್ಲದೆ ಮಹಿಳಾ ಕ್ರಿಕೆಟ್‌ನಲ್ಲಿ ಆರಂಭಿಕ ಆಟಗಾರ್ತಿಯಾಗಿ ಅತ್ಯಧಿಕ 50+ ಸ್ಕೋರ್ ಗಳಿಸಿದ 3ನೇ ಆಟಗಾರ್ತಿ ಎನಿಸಿದ್ದಾರೆ. ನ್ಯೂಜಿಲೆಂಡ್​ನ ಸೂಜಿ ಬೇಟ್ಸ್​ ಏಕದಿನ ಕ್ರಿಕೆಟ್​​ನಲ್ಲಿ 32 ಬಾರಿ ಈ ಸಾಧನೆ ಮಾಡಿದ್ದಾರೆ.

116 ಎಸೆತಗಳನ್ನು ಎದುರಿಸಿ ವೃತ್ತಿಜೀವನದ 6ನೇ ಶತಕ ದಾಖಲಿಸಿದ ಸ್ಮೃತಿ ಅವರ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ, 1 ಸಿಕ್ಸರ್‌ ಇದೆ. ಅಲ್ಲದೆ ಭಾರತ ಮಹಿಳಾ ತಂಡದ ಪರ ಅಧಿಕ ಶತಕ ಸಿಡಿಸಿದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹರ್ಮನ್​ಪ್ರೀತ್ ಕೌರ್​ 5 ಶತಕ ಸಿಡಿಸಿದ್ದು, ಅವರನ್ನು ಸ್ಮೃತಿ ಹಿಂದಿಕ್ಕಿದ್ದಾರೆ. ಮಿಥಾಲಿ ರಾಜ್ 7 ಏಕದಿನ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕಪ್‌ನಿಂದ ಹೊರಬಿದ್ದ ಬೆನ್ನಲ್ಲೇ ಪಾಕ್‌ ಆಟಗಾರರಿಗೆ ಶಾಕ್‌: ವೇತನ ಕಡಿತಕ್ಕೆ ಮುಂದಾದ ಪಿಸಿಬಿ