ಇದೇ ತಿಂಗಳ 22 ರಂದು ನ್ಯೂಜಿಲೆಂಡ್ ವಿರುದ್ಧ ಪ್ರಾರಂಭವಾಗಲಿರುವ 3 ಪಂದ್ಯಗಳ ಕ್ರಿಕೆಟ್ ಸರಣಿಗೆ ಬಿಸಿಸಿಐ ಸೋಮವಾರ( ಸೆಪ್ಟೆಂಬರ್ 12) ಭಾರತ ತಂಡವನ್ನು ಪ್ರಕಟಿಸಲಿದೆ.
ಮುಂಬೈನಲ್ಲಿರುವ ಬಿಸಿಸಿಐ ಕಚೇರಿಯಲ್ಲಿ ಸೋಮವಾರ ಸಭೆ ಸೇರಲಿರುವ ಆಯ್ಕೆ ಸಮಿತಿ ಮುಂಜಾನೆ 11 ಗಂಟೆ ಸುಮಾರಿಗೆ ತಂಡವನ್ನು ಘೋಷಿಸಲಿದೆ.
ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 22 ರಂದು ಕಾನ್ಪುರದಲ್ಲಿ ನಡೆಯಲಿದ್ದು, ದ್ವಿತೀಯ ಪಂದ್ಯ ಕೋಲ್ಕತಾದಲ್ಲಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 4 ಮತ್ತು ಕೊನೆಯ ಪಂದ್ಯ ಇಂದೋರ್‌ನಲ್ಲಿ ಅಕ್ಟೋಬರ್ 8 ರಿಂದ 12ರವರೆಗೆ ನಡೆಯಲಿದೆ. ಬಳಿಕ ಎರಡು ತಂಡಗಳು 5 ಪಂದ್ಯಗಳ ಏಕದಿನ ಸರಣಿಯನ್ನಾಡಲಿವೆ.
ನ್ಯೂಜಿಲೆಂಡ್ ಆಯ್ಕೆ ಸಮಿತಿ ಈಗಾಗಲೇ ತಮ್ಮ ತಂಡವನ್ನು ಪ್ರಕಟಿಸಿದೆ. ಇತ್ತೀಚಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ತಂಡವನ್ನೇ ಉಳಿಸಿಕೊಂಡಿರುವ ಸಮಿತಿ ಕೇವಲ ಮೂರು ಬದಲಾವಣೆಯನ್ನು ತಂದಿದೆ. ವೇಗಿ ಮ್ಯಾಟ್ ಹೆನ್ರಿ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಜೀತ್ ರಾವಲ್‌ಗೆ ಕೊಕ್ ನೀಡಲಾಗಿದೆ. ನೀಶಾಮ್ ಅವರನ್ನು ಮರಳಿ ಕರೆ ತರಲಾಗಿದೆ.
ಇತ್ತೀಚಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಸೋತಿರುವ ನ್ಯೂಜಿಲೆಂಡ್ ಸದ್ಯ ಐಸಿಸಿ ಶ್ರೇಯಾಂಕದಲ್ಲಿ 7 ನೇ ಸ್ಥಾನದಲ್ಲಿದ್ದು,ಭಾರತ 2 ನೇ ಸ್ಥಾನದಲ್ಲಿದೆ.
ತಂಡ ಇಂತಿದೆ: ಕೇನ್ ವಿಲಿಯಮ್ಸ್ ( ನಾಯಕ) , ಟ್ರೆಂಟ್ ಬ್ರಾಸ್‌ವೆಲ್, ಮಾರ್ಕ್ ಕ್ರೇಗ್, ಮಾರ್ಟಿನ್ ಗಪ್ಟಿಲ್, ಟಾಮ್ ಲಥಾಮನ್, ಜಿಮ್ಮಿ ನೀಶಾಮ್, ಹೆನ್ನಿ ನಿಕೋಲ್ಸ್, ಲೂಕ್ ರಾಂಚಿ, ಮಿಚೆಲ್ ಸ್ಯಾಂಟ್ನರ್ , ಐಸ್ ಲೋಧಿ, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್, ಬಿಜೆ ವಾಟ್ಲಿಂಗ್.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ