ಮುಂಬೈ: 2022 ರ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವಾಡಲಿದ್ದಾರೆ.
ಮಾರ್ಚ್ 6 ರಂದು ಈ ಬದ್ಧ ಎದುರಾಳಿಗಳ ನಡುವಿನ ಪಂದ್ಯ ನಡೆಯಲಿದೆ. ನ್ಯೂಜಿಲೆಂಡ್ ನಲ್ಲಿ ಟೂರ್ನಿ ನಡೆಯಲಿದ್ದು, ಮಾರ್ಚ್ 4 ರಿಂದ ವಿಶ್ವಕಪ್ ಗೆ ಚಾಲನೆ ಸಿಗಲಿದೆ.
ಒಟ್ಟು 31 ದಿನಗಳ ಕಾಲ 31 ಪಂದ್ಯಗಳು ನಡೆಯಲಿವೆ. ಒಟ್ಟು ಎಂಟು ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಈ ಪೈಕಿ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಮತ್ತು ದ.ಆಫ್ರಿಕಾ ತಂಡಗಳು ರ್ಯಾಂಕಿಂಗ್ ಆಧರಿಸಿ ನೇರವಾಗಿ ಟೂರ್ನಿಗೆ ಅರ್ಹತೆ ಪಡೆದಿವೆ. ಉಳಿದ ನಾಲ್ಕು ತಂಡಗಳನ್ನು ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಗೆಲುವು ಆಧರಿಸಿ ಆಯ್ಕೆ ಮಾಡಲಾಗುತ್ತದೆ ಎಂದು ಐಸಿಸಿ ಪ್ರಕಟಣೆ ನೀಡಿದೆ.