ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಅಂತಿಮ ಮತ್ತು ನಿರ್ಣಾಯಕ ಏಕದಿನ ಪಂದ್ಯ ಕೇರಳದ ತಿರುವನಂತಪುರಂನಲ್ಲಿ ನಡೆಯಲಿದೆ.
ಈಗಾಗಲೇ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯ ಗೆದ್ದು ಸರಣಿ ಗೆಲ್ಲುವ ಉತ್ಸಾಹದಲ್ಲಿದ್ದರೆ, ಅತ್ತ ವಿಂಡೀಸ್ ಈ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ಛಲದಲ್ಲಿದೆ.
ತಮ್ಮ ಫಾರ್ಮ್ ನಿಂದಾಗಿ ವ್ಯಾಪಕ ಚರ್ಚೆಗೊಳಗಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಈ ಪಂದ್ಯದಲ್ಲಿ ಒಂದು ರನ್ ಗಳಿಸಿದರೆ ಏಕದಿನ ಪಂದ್ಯಗಳಲ್ಲಿ 10 ಸಾವಿರ ರನ್ ಗಳಿಸಿದ ಸಾಧಕರ ಸಾಲಿಗೆ ಸೇರ್ಪಡೆಯಾಗಲಿದ್ದಾರೆ. ಸದ್ಯಕ್ಕೆ ಧೋನಿ ಖಾತೆಯಲ್ಲಿ 9999 ರನ್ ಗಳಿವೆ.
ಈ ಪಂದ್ಯದಲ್ಲಿ ಭಾರತ ಹೆಚ್ಚಿನ ಬದಲಾವಣೆ ಮಾಡುವ ಸಾಧ‍್ಯತೆ ಕಡಿಮೆ. ಮಧ್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು ಮಿಂಚಿದ್ದು ವಿರಾಟ್ ಕೊಹ್ಲಿ ಚಿಂತೆ ದೂರ ಮಾಡಿದೆ. ಬೌಲಿಂಗ್ ವಿಭಾಗವೂ ಕಳೆದ ಪಂದ್ಯದಲ್ಲಿ ಉತ್ತಮವಾಗಿ ಆಡಿದ್ದರಿಂದ ಅದೇ ತಂಡದೊಂದಿಗೆ ಕೊಹ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.