ಬರ್ಮಿಂಗ್ ಹ್ಯಾಮ್`ನಲ್ಲಿ ನಡೆಯುತ್ತಿರುವ ಚಾಂಪಿಯನ್ಞಸ್ ಟ್ರೋಫಿ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ತಂಡವೇ ಕಣಕ್ಕಿಳಿಯುತ್ತಿದೆ. ಹಿಂದಿನ ಪಂದ್ಯದಲ್ಲಿ ಉಮೇಶ್ ಯಾದವ್`ಗೆ ಕೊಕ್ ನೀಡಿ ಅಶ್ವಿನ್`ಗೆ ಅವಕಾಶ ನೀಡಲಾಗಿತ್ತು. ಅಶ್ವಿನ್ ಅವರನ್ನ ತಂಡದಲ್ಲಿ ಮುಂದುವರಿಸಲಾಗಿದೆ.
ಭಾರತ ತಂಡ ಇಂತಿದೆ:
ವಿರಾಟ್ ಕೊಹ್ಲಿ, ಶಿಖರ್ ಧವನ್’, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ