ನವದೆಹಲಿ: ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಈ ಪಂದ್ಯಕ್ಕೂ ಉಳಿಸಿಕೊಳ್ಳಲು ನಾಯಕ ಧೋನಿ ನಿರ್ಧರಿಸಿದ್ದಾರೆ. ಆದರೆ ನ್ಯೂಜಿಲೆಂಡ್ ತಂಡದಲ್ಲಿ ಮೂರು ಬದಲಾವಣೆಗಳಿದ್ದು, ಬೌಲ್ಟ್, ಹೆನ್ರಿ ಮತ್ತು ಡೆವಿಸಿಚ್ ಬ್ರೇಸ್ ವೆಲ್, ಟಿಂ ಸೌಥಿ ಮತ್ತು ನೀಶಾಮ್ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ.
ಈ ಪಂದ್ಯ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ತವರಿನಲ್ಲಿ ನಡೆಯುತ್ತಿರುವುದರಿಂದ ಅವರ ಮೇಲೆ ಅಪಾರ ನಿರೀಕ್ಷೆಯಿದೆ. ಹಾಗೂ ನಾಯಕನಾಗಿ ಕೊಹ್ಲಿ ಯಶಸ್ವಿಯಾಗುತ್ತಿರುವುದರಿಂದ ಸೀಮಿತ ಓವರ್ ಗಳ ನಾಯಕ ಧೋನಿ ಮೇಲೆ ಒತ್ತಡ ಹೆಚ್ಚಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ