ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನವಂಬರ್ 22 ರಿಂದ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆಡಲಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಭಾರತೀಯ ಸೇನೆ ನೇತೃತ್ವ ವಹಿಸಲಿದೆ.
ಈ ಪಂದ್ಯ ಭಾರತ ಮತ್ತು ಬಾಂಗ್ಲಾ ಆಡಲಿರುವ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯವಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಹೀಗಾಗಿ ಪಂದ್ಯಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ಈ ಪಂದ್ಯಕ್ಕೆ ಮೊದಲು ರಾಷ್ಟ್ರಗೀತೆ ನುಡಿಸಲಾಗುತ್ತದೆ. ವಿಶೇಷವೆಂದರೆ ಭಾರತ ಮತ್ತು ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಸ್ವತಃ ಭಾರತೀಯ ಸೇನೆ ನುಡಿಸಲಿದೆ. ಅದೂ ವಿಶೇಷ ರೀತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಕ್ಕಾ ಸೇನಾ ಶೈಲಿಯಲ್ಲಿ ಪ್ಯಾರಾಟ್ರೂಪ್ ಸದಸ್ಯರು ರಾಷ್ಟ್ರಗೀತೆ ಬಳಿಕ ಉಭಯ ನಾಯಕರಿಗೆ ಪಿಂಕ್ ಬಾಲ್ ಹಸ್ತಾಂತರಿಸಲಿದ್ದಾರೆ.