Webdunia - Bharat's app for daily news and videos

Install App

ಶ್ರೀಲಂಕಾ ವಿರುದ್ಧ ಏಕದಿನ ಗೆಲುವು ಕಂಡ ಹರ್ಮನ್ ಪ್ರೀತ್ ಪಡೆ

Webdunia
ಶುಕ್ರವಾರ, 1 ಜುಲೈ 2022 (16:36 IST)
ಪಲ್ಲಿಕೆಲೆ: ಶ್ರೀಲಂಕಾ ಮತ್ತು ಭಾರತ ಮಹಿಳಾ ಕ್ರಿಕೆಟ್‍ ತಂಡದ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಹರ್ಮನ್ ಪ್ರೀತ್ ಕೌರ್ ಪಡೆ 4 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಲಂಕಾ 48.2 ಓವರ್ ಗಳಲ್ಲಿ 171 ರನ್ ಗಳಿಗೆ ಆಲೌಟ್ ಆಗಿತ್ತು. ಲಂಕಾ ಪರ ನೀಲಸಾಕ್ಷಿ ಡಿ ಸಿಲ್ವಾ 43, ಹಾಸಿನಿ ಪೆರೆರಾ 37 ರನ್ ಗಳಿಸಿದರು. ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ರೇಣುಕಾ ಸಿಂಗ್, ದೀಪ್ತಿ ಶರ್ಮಾ ತಲಾ 3 ವಿಕೆಟ್ ತಮ್ಮದಾಗಿಸಿಕೊಂಡರು. ಉಳಿದಂತೆ ಪೂಜಾ ವಸ್ತ್ರಾಕರ್ 2, ರಾಜೇಶ್ವರಿ ಗಾಯಕ್ ವಾಡ್, ಹರ್ಮನ್ ಪ್ರೀತ್ ಕೌರ್ ತಲಾ 1 ವಿಕೆಟ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತದ ಪರ ಶಪಾಲಿ ವರ್ಮ 35 ರನ್ ಗಳಿಸಿದರು. ಆದರೆ ನಂತರ ಸ್ಮೃತಿ ಮಂಥನಾ, ಯಶಿಕಾ ಭಾಟಿಯಾ ಬೇಗನೇ ಔಟಾದರು. ಆದರೆ ನಾಯಕಿಯ ಆಟವಾಡಿದ ಹರ್ಮನ್ ಪ್ರೀತ್ ಕೌರ್ 44, ಹರ್ಲಿನ್ ಡಿಯೋಲ್ 34 ರನ್ ಗಳಿಸಿ ಆಧಾರವಾದರು. ಕೊನೆಯಲ್ಲಿ ದೀಪ್ತಿ ಶರ್ಮಾ ಅಜೇಯ 22, ಪೂಜಾ ವಸ್ತ್ರಾಕರ್ ಬಿರುಸಿನ 21 ರನ್ ಗಳಿಸಿ ತಂಡದ ಗೆಲುವು ಖಚಿತಪಡಿಸಿದರು. ಲಂಕಾ  ಪರ ಇನೋಕಾ ರಣವೀರ 4 ವಿಕೆಟ್ ಕಬಳಿಸಿದರು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಅಂತರದ ಮುನ್ನಡೆ ಸಾಧಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments