Webdunia - Bharat's app for daily news and videos

Install App

ಐಪಿಎಲ್ 2024: ಔಟಾದ ಬೇಸರಕ್ಕೆ ಮೆಟ್ಟಿಲ ಮೇಲೆ ಕೂತು ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Krishnaveni K
ಬುಧವಾರ, 22 ಮೇ 2024 (10:54 IST)
Photo Courtesy: Twitter
ಅಹಮ್ಮದಾಬಾದ್: ಐಪಿಎಲ್ 2024 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಉತ್ತಮ ಲಯದಲ್ಲಿದ್ದಾಗಲೇ ಔಟಾದ ಬೇಸರದಲ್ಲಿ ಬ್ಯಾಟಿಗ ರಾಹುಲ್ ತ್ರಿಪಾಠಿ ಅಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಈ ಪಂದ್ಯವನ್ನು ಕೆಕೆಆರ್ ತಂಡ 8 ವಿಕೆಟ್ ಗಳಿಂದ ಜಯ ಗಳಿಸಿತು. ಎಚ್ ಆರ್ ಎಚ್ 159 ರನ್ ಗಳಿಗೇ ಆಲೌಟ್ ಆಯಿತು. ಪ್ರಮುಖ ಬ್ಯಾಟಿಗರು ಕೈಕೊಟ್ಟಾಗ ಹೈದರಾಬಾದ್ ಪರ ರಾಹುಲ್ ತ್ರಿಪಾಠಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 35 ಎಸೆತಗಳಿಂದ 1 ಸಿಕ್ಸರ್ ಸಹಿತ 55 ರನ್ ಗಳಿಸಿದರು.

ಆದರೆ ಈ ಹಂತದಲ್ಲಿ ಜೊತೆಗಾರ ಆಟಗಾರ ಅಬ್ದುಲ್ ಸಮದ್ ನೀಡಿದ ಕರೆಗೆ ಓಡಿದ ತ್ರಿಪಾಠಿ ದುರದೃಷ್ಟವಶಾತ್ ರನೌಟ್ ಆಗಬೇಕಾಯಿತು. ಇದು ಅವರನ್ನು ತೀವ್ರ ಹತಾಶೆಗೆ ದೂಡಿತು. ತಂಡಕ್ಕೆ ದೊಡ್ಡ ಮೊತ್ತ ಕೊಡಿಸಬಹುದೆಂಬ ನಿರೀಕ್ಷೆಯಲ್ಲಿದ್ದ ಅವರಿಗೆ ರನೌಟ್ ಆಘಾತ ನೀಡಿತ್ತು.

ಹೀಗಾಗಿ ಪೆವಿಲಿಯನ್ ಗೆ ತೆರಳುವ ಹಾದಿಯಲ್ಲಿ ಮೆಟ್ಟಿಲ ಮೇಲೆ ಕುಳಿತು ಕೆಲ ಕಾಲ ಬಿಕ್ಕಿ ಬಿಕ್ಕಿ ಅತ್ತರು. ಅವರು ಅಳುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತ್ರಿಪಾಠಿ ಅವಸ್ಥೆ ನೋಡಿ ನೆಟ್ಟಿಗರೂ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments