Webdunia - Bharat's app for daily news and videos

Install App

ಐಪಿಎಲ್ 2024: ಬರ್ತ್ ಡೇ ದಿನವೇ ರೋಹಿತ್ ಶರ್ಮಾಗೆ ಸೋಲಿನ ಕಹಿ ತಿನಿಸಿದ ಲಕ್ನೋ ಸೂಪರ್ ಜೈಂಟ್ಸ್

Krishnaveni K
ಬುಧವಾರ, 1 ಮೇ 2024 (06:50 IST)
ಲಕ್ನೋ: ಐಪಿಎಲ್ 2024 ರಲ್ಲಿ ರೋಹಿತ್ ಶರ್ಮಾಗೆ ಬರ್ತ್ ಡೇ ದಿನವೇ ಸೋಲಿನ ಕಹಿ ಸಿಕ್ಕಿದೆ. ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ 4 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಬ್ಯಾಟಿಂಗ್ ವೈಫಲ್ಯಕ್ಕೊಳಗಾಗಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಶಕ್ತವಾಯಿತು. ಹುಟ್ಟುಹಬ್ಬದ ದಿನ ರೋಹಿತ್ ಶರ್ಮಾರಿಂದ ಭರ್ಜರಿ ಇನಿಂಗ್ಸ್ ನಿರೀಕ್ಷೆಯಿತ್ತು. ಆದರೆ ಅವರು ಕೇವಲ 4 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ ಇಶಾನ್ ಕಿಶನ್ 32 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಮಧ‍್ಯಮ ಕ್ರಮಾಂಕ ಸಂಪೂರ್ಣವಾಗಿ ಕೈ ಕೊಟ್ಟ ಮೇಲೆ ಕೆಳ ಕ್ರಮಾಂಕದಲ್ಲಿ ನೇಹಲ್ ವಧೇರಾ 46 ಮತ್ತು ಟಿಮ್ ಡೇವಿಡ್ ಬಿರುಸಿನ 35 ರನ್ ಗಳಿಸಿ ತಂಡಕ್ಕೆ ಗೌರವಯುತ ಮೊತ್ತ ಕೊಡಿಸಲು ನೆರವಾದರು.

ಈ ಮೊತ್ತ ಬೆನ್ನತ್ತಿದ ಲಕ್ನೋಗೆ ಅರ್ಶಿನ್ ಕುಲಕರ್ಣಿ ಶೂನ್ಯಕ್ಕೆ ನಿರ್ಗಮಿಸುವ ಮೂಲಕ ಆರಂಭದಲ್ಲೇ ಆಘಾತ ನೀಡಿದರು. ಆದರೆ ನಾಯಕ ಕೆಎಲ್ ರಾಹುಲ್  28 ರನ್ ಗಳಿಸಿದರು. ಇನ್ನೊಂದೆಡೆ ತಂಡದ ಗೆಲುವಿನ ರೂವಾರಿಯಾಗಿದ್ದು ಮಾರ್ಕಸ್ ಸ್ಟಾಯ್ನಿಸ್. 45 ಎಸೆತ ಎದುರಿಸಿದ ಅವರು 62 ರನ್ ಗಳಿಸಿದರು. ಇದರೊಂದಿಗೆ ಲಕ್ನೋ 19.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗೆಲುವು ಕಂಡಿತು.

ಇದರೊಂದಿಗೆ ಒಟ್ಟು 12 ಅಂಕ ಸಂಪಾದಿಸಿದ ಲಕ್ನೋ ಮೂರನೇ ಸ್ಥಾನವನ್ನು ಭದ್ರಪಡಿಸಿತು. ಇತ್ತ ಮುಂಬೈ 10 ಪಂದ್ಯಗಳಿಂದ 7 ನೇ ಸೋಲು ಕಂಡು ಅಂಕಪಟ್ಟಿಯಲ್ಲಿ 9 ನೇ ಸ್ಥಾನಕ್ಕೆ ಜಾರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments