ಮುಂಬೈ: ಈ ಬಾರಿ ಐಪಿಎಲ್ ನಲ್ಲಿ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕಿತ್ತೊಗೆದು ಆ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯರನ್ನು ನೇಮಿಸಿರುವುದು ತಂಡದೊಳಗೆ ಒಡಕು ಮೂಡಿಸಿದೆ ಎಂದು ವರದಿಯಾಗಿತ್ತು.
ಹಾರ್ದಿಕ್ ರನ್ನು ನಾಯಕನಾಗಿ ನೇಮಿಸಿದ್ದಕ್ಕೆ ಅಸಮಾಧಾನಗೊಂಡ ರೋಹಿತ್, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಮುಂಬೈ ಬಿಟ್ಟು ಸಿಎಸ್ ಕೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು.
ಆದರೆ ಅದೆಲ್ಲಾ ಸುಳ್ಳು ಎಂದು ಮುಂಬೈ ಇಂಡಿಯನ್ಸ್ ಸ್ಪಷ್ಟಪಡಿಸಿದೆ. ವರದಿಯಾಗುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು. ಯಾವ ಆಟಗಾರರೂ ಮುಂಬೈ ಬಿಟ್ಟು ಹೋಗುತ್ತಿಲ್ಲ. ಹಾಗೆಯೇ ನಾವೂ ಯಾರನ್ನೂ ಬಿಟ್ಟುಕೊಡುತ್ತಿಲ್ಲ ಎಂದು ಮುಂಬೈ ತಂಡದ ಮೂಲಗಳು ಸ್ಪಷ್ಟಪಡಿಸಿದೆ.
ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದ ಮೇಲೆ ಸೂರ್ಯ, ಬುಮ್ರಾ ಸೋಷಿಯಲ್ ಮೀಡಿಯಾ ಮೂಲಕ ಬೇಸರ ಹೊರಹಾಕಿದ್ದರು. ಇದೇ ಕಾರಣಕ್ಕೆ ಈ ಆಟಗಾರರು ಬೇರೆ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಹರಿದಾಡುತ್ತಿತ್ತು.