Webdunia - Bharat's app for daily news and videos

Install App

ಐಪಿಎಲ್ 2024: ಮುಂಬೈ ಇಂಡಿಯನ್ಸ್ ಗೆಲುವಿನಿಂದ ಸನ್ ರೈಸರ್ಸ್ ಗೆ ಸಂಕಷ್ಟ

Krishnaveni K
ಮಂಗಳವಾರ, 7 ಮೇ 2024 (08:45 IST)
Photo Courtesy: Twitter
ಮುಂಬೈ: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ವಿರುಧ‍್ಧ 7 ವಿಕೆಟ್ ಗಳಿಂದ ಸೋತ ಸನ್ ರೈಸರ್ಸ್ ಹೈದರಾಬಾದ್ ತಂಡ ಇದೀಗ ನಿರ್ಣಾಯಕ ಘಟ್ಟದಲ್ಲಿ ಸಂಕಷ್ಟಕ್ಕೀಡಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಟ್ರಾವಿಸ್ ಹೆಡ್ 48 ರನ್, ಪ್ಯಾಟ್ ಕುಮಿನ್ಸ್ ಅಜೇಯ 35 ರನ್ ಗಳಿಸಿದ್ದರು. ಇದರಿಂದಾಗಿ ಹೈದರಾಬಾದ್ ಗೌರವಯುತ ಮೊತ್ತ ಗಳಿಸಲು ಸಾಧ್ಯವಾಯಿತು. ಮುಂಬೈ ಪರ ಹಾರ್ದಿಕ್ ಪಾಂಡ್ಯ, ಪಿಯೂಷ್ ಚಾವ್ಲಾ ತಲಾ 3 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈಗೆ ಅಗ್ರ ಕ್ರಮಾಂಕ ಕೈಕೊಟ್ಟಿತು. ರೋಹಿತ್ ಶರ್ಮಾ 4, ಇಶಾನ್ ಕಿಶನ್ 9 ರನ್, ನಮನ್ ಧೀರ್ ಶೂನ್ಯಕ್ಕೆ ಔಟಾದರು. ಇದರಿಂದ ಮುಂಬೈ ಸಂಕಷ್ಟಕ್ಕೀಡಾಯಿತು. ಆದರೆ ಈ ಹಂತದಲ್ಲಿ ಮುಂಬೈಗೆ ಆಸರೆಯಾದ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಗಳಿಸಿ ಮಿಂಚಿದರು. 51 ಎಸೆತ ಎದುರಿಸಿದ ಸೂರ್ಯ ಅಜೇಯ 102 ರನ್ ಗಳಿಸಿದರು. ತಿಲಕ್ ವರ್ಮ 37 ರನ್ ಗಳಿಸಿದರು. ಅಂತಿಮವಾಗಿ ಮುಂಬೈ 17.2 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು.

ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 12 ಪಂದ್ಯಗಳಿಂದ 4 ಗೆಲುವುಗಳೊಂದಿಗೆ ಈಗ 9 ನೇ ಸ್ಥಾನದಲ್ಲಿದೆ. ಇತ್ತ ಸನ್ ರೈಸರ್ಸ್ ಹೈದರಾಬಾದ್ ನಿರ್ಣಾಯಕ ಹಂತದಲ್ಲಿ ಸೋತು ಅಂಕಪಟ್ಟಿಯಲ್ಲಿ 4 ನೇ ಸ್ಥಾನಕ್ಕೆ ಜಾರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments