Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ನಾಳೆ ಮುಂಬೈನಲ್ಲಿ ಐಪಿಎಲ್ 11 ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಗಲಿದೆ. ಬಳಿಕ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ.
ಆದರೆ ಬೆಂಗಳೂರಿನ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿರುವುದು ರಾಯಲ್ ಚಾಲೆಂಜರ್ಸ್ ತಂಡ ಸೆಣಸಾಡುವುದನ್ನು. ಆರ್ ಸಿಬಿ ಪಂದ್ಯವಿರುವುದು ಭಾನುವಾರ ರಾತ್ರಿ.
ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ ಸಿಬಿ ತಂಡ ಭಾನುವಾರ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ಮೊದಲ ಪಂದ್ಯವಾಡಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ನಡೆಯಲಿದೆ. ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ಮತ್ತು ದಿನೇಶ್ ಕಾರ್ತಿಕ್ ನೇತೃತ್ವದ ಕೆಕೆಆರ್ ನಡುವಿನ ಈ ಪಂದ್ಯಕ್ಕೆ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.