Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅನುಭವಿ ವೇಗಿ ಇಶಾಂತ್ ಶರ್ಮಾಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ.
ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಇಶಾಂತ್ ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಗೆ ಅವಕಾಶ ನೀಡಲಾಗಿತ್ತು. ಆದರೆ ಸಿರಾಜ್ ರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿರಲಿಲ್ಲ.
ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆದ್ದು ಐತಿಹಾಸಿಕ ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾ ತಂಡದಲ್ಲಿ ಅನುಭವಿ ಇಶಾಂತ್ ಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ತವರಿನಲ್ಲಿ ಇಶಾಂತ್ ಪ್ರದರ್ಶನ ಕಳಾಹೀನವಾಗಿತ್ತು. ಆದರೆ ದ.ಆಫ್ರಿಕಾ ವೇಗಿಗಳ ಪಿಚ್ ನಲ್ಲಿ ಇಶಾಂತ್ ಬೌಲಿಂಗ್ ಪರಿಣಾಮಕಾರಿಯಾಗಬಹುದು ಎಂಬ ವಿಶ್ವಾಸವಿದೆ.