Webdunia - Bharat's app for daily news and videos

Install App

ಮತ್ತೆ ಕೈಚಳಕ ತೋರಿದ ಜಡೇಜ: ಭಾರತಕ್ಕೆ 147 ರನ್​ಗಳ ಗೆಲುವಿನ ಗುರಿ ನೀಡಿದ ಕಿವೀಸ್‌

Sampriya
ಭಾನುವಾರ, 3 ನವೆಂಬರ್ 2024 (10:59 IST)
Photo Courtesy X
ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್​ ನಡುವಿನ ಟೆಸ್ಟ್​ ಸರಣಿಯ ಮೂರನೇ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲೂ ರವೀಂದ್ರ ಜಡೇಜ ಕೈಚಳಕ ತೋರಿದ್ದಾರೆ. ಹೀಗಾಗಿ, ನ್ಯೂಜಿಲೆಂಡ್‌ ತಂಡ 174 ರನ್‌ಗೆ ಕುಸಿದಿದೆ. ಹೀಗಾಗಿ ಭಾರತ ತಂಡದ ಗೆಲುವಿಗೆ 147 ರನ್‌ ಬೇಕಿದೆ.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್​ ತಂಡವು ಡೆರಿಲ್​ ಮಿಚೆಲ್​ (82 ರನ್​, 129 ಎಸೆತ), ವಿಲ್​ ಯಂಗ್​ (71 ರನ್​, 138 ಎಸೆತ, 4 ಬೌಂಡರಿ, 2 ಸಿಕ್ಸರ್​) ಅರ್ಧಶತಕಗಳ ಫಲವಾಗಿ 65.4 ಓವರ್​ಗಳಲ್ಲಿ 235 ರನ್​ಗಳಿಗೆ ಆಲೌಟ್​ ಆಯಿತು. ಭಾರತದ ಪರ ರವೀಂದ್ರ ಜಡೇಜ ಮತ್ತು ವಾಷಿಂಗ್ಟನ್​ ಸುಂದರ್​ ಕ್ರಮವಾಗಿ ಐದು ಮತ್ತು ನಾಲ್ಕು ವಿಕೆಟ್‌ ಪಡೆದಿದ್ದರು.

ಮೂರು ಪಂದ್ಯಗಳ ಸರಣಿಯನ್ನು ಪ್ರವಾಸಿ ತಂಡ ಈಗಾಗಲೇ 2–0ರಿಂದ ಗೆದ್ದುಕೊಂಡಿದೆ. ಭಾರತ ತಂಡವು  ಕೊನೆಯ ಪಂದ್ಯದಲ್ಲಿ ಗೆದ್ದು ವೈಟ್‌ವಾಷ್‌ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದೆ.

ಇದಕ್ಕೆ ಉತ್ತರವಾಗಿ ಭಾರತ ತಂಡವು ಶುಭಮನ್​ ಗಿಲ್​ (90 ರನ್, 146 ಎಸೆತ), ರಿಷಭ್​ ಪಂತ್​ (60 ರನ್​, 59 ಎಸೆತ) ಅರ್ಧಶತಕಗಳ ಫಲವಾಗಿ 263 ರನ್​ಗಳಿಸಿ ಆಲೌಟ್​ ಆಯಿತು. ಈ ಮೂಲಕ ಎದುರಾಳಿಗಳ ವಿರುದ್ಧ 28 ರನ್​ಗಳಅ ಅತ್ಯಲ್ಪ ಮುನ್ನಡೆಯನ್ನು ಭಾರತ ತಂಡ ಸಾಧಿಸಿತು. ನ್ಯೂಜಿಲೆಂಡ್​ ಪರ ಏಜಾಜ್​ ಪಟೇಲ್​ ಐದು ವಿಕೆಟ್​ ಪಡೆದಿದ್ದರು.

28 ರನ್​ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್​ ಆರಂಭಿಸಿದ ನ್ಯೂಜಿಲೆಂಡ್ ತಂಡವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬೌಲರ್‌ಗಳು ಕಾಡಿದರು. ಜಡೇಜ ಐದು ವಿಕೆಟ್‌ ಪಡೆದರೆ, ರವಿಚಂದ್ರನ್‌ ಅಶ್ವಿನ್‌ ಮೂರು ವಿಕೆಟ್‌ ಪಡೆದರು. ಈ ಮೂಲಕ ಭಾರತ ತಂಡವು 147 ರನ್​ಗಳ ಗುರಿಯನ್ನು ಪಡೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments