ಮುಂಬೈ: ಕಳೆದ ಒಂದು ವರ್ಷದಿಂದ ಗಾಯದ ಸಮಸ್ಯೆಯಿಂದ ಕ್ರಿಕೆಟ್ ಕಣದಿಂದ ದೂರವಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಅವರು ನಾಯಕನಾಗಿ ತಂಡಕ್ಕೆ ವಾಪಸಾಗುತ್ತಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಮುಗಿದ ಬಳಿಕ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಕೋಚ್ ರಾಹುಲ್ ದ್ರಾವಿಡ್ ಗೂ ವಿಶ್ರಾಂತಿ ನೀಡಲಾಗಿದೆ.
ವಿವಿಎಸ್ ಲಕ್ಷ್ಮಣ್ ತಂಡದ ಮುಖ್ಯ ಕೋಚ್ ಆಗಿರಲಿದ್ದು, ಜಸ್ಪ್ರೀತ್ ಬುಮ್ರಾ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಮೂಲಕ ತಂಡಕ್ಕೆ ವಾಪಸ್ ಆಗುತ್ತಲೇ ಬುಮ್ರಾಗೆ ದೊಡ್ಡ ಜವಾಬ್ಧಾರಿ ಸಿಗಲಿದೆ. ಜೊತೆಗೆ ಮುಂಬರುವ ಏಷ್ಯಾ ಕಪ್, ಏಕದಿನ ವಿಶ್ವಕಪ್ ಗೆ ಮುನ್ನ ಬುಮ್ರಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅಭ್ಯಾಸವಾಗಲು ಉತ್ತಮ ವೇದಿಕೆ ಸಿಕ್ಕಂತಾಗಲಿದೆ.
ಐರ್ಲೆಂಡ್ ಟಿ20 ಸರಣಿಗೆ ಟೀಂ ಇಂಡಿಯಾ ಇಂತಿದೆ.
ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಝ್ ಅಹಮ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ ಕೃಷ್ಣ, ಅರ್ಷ್ ದೀಪ್ ಸಿಂಗ್, ಮುಕೇಶ್ ಕುಮಾರ್, ಆವೇಶ್ ಖಾನ್.