Webdunia - Bharat's app for daily news and videos

Install App

ಸಾವು ಬರಬಹುದು ಆದರೆ ಪಾಕಿಸ್ತಾನಕ್ಕೆ ಬರದೇ ಇರಬೇಡಿ.. ಟೀಂ ಇಂಡಿಯಾಕ್ಕೆ ಆಹ್ವಾನವಿತ್ತ ಜಾವೇದ್ ಮಿಯಾಂದಾದ್

Krishnaveni K
ಬುಧವಾರ, 19 ಜೂನ್ 2024 (16:16 IST)
ಕರಾಚಿ: ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನಕ್ಕೆ ತೆರಳುವುದು ಅನಿಶ್ಚಿತತೆಯಲ್ಲಿರುವಾಗಲೇ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿ ಆಹ್ವಾನಿಸಿದ್ದಾರೆ.

2025 ರಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಈ ಪ್ರತಿಷ್ಠಿತ ಟೂರ್ನಿಗೆ ಭಾರತ ತಂಡವನ್ನು ಕಳುಹಿಸಲು ಕೇಂದ್ರ ಸರ್ಕಾರ ಅನುಮತಿ ನೀಡುವುದು ಅನುಮಾನ. ಆದರೆ ಭಾರತ ತೆರಳದೇ ಇದ್ದರೆ ಪಾಕಿಸ್ತಾನಕ್ಕೆ ದೊಡ್ಡ ನಷ್ಟವಾಗಲಿದೆ. ಇದರ ನಡುವೆ ಜಾವೇದ್ ಮಿಯಾಂದಾದ್ ಹೇಳಿಕೆಯೊಂದನ್ನು ನೀಡಿದ್ದಾರೆ.

‘ಸಾವು ಎನ್ನುವುದು ನಿಶ್ಚಿತ. ಸಾವು ಯಾವಾಗ ಬೇಕಾದರೂ, ಎಲ್ಲಿ ಬೇಕಾದರೂ ಬರಬಹುದು. ಆದರೆ ಸಾವಿಗೆ ಹೆದರಿ ಪಾಕಿಸ್ತಾನಕ್ಕೆ ಬರದೇ ಇರಬೇಡಿ. ಭಾರತ ತಂಡ ಪಾಕಿಸ್ತಾನಕ್ಕೆ ಬರಲು ಹೆದರಬೇಕಾಗಿಲ್ಲ’ ಎಂಬ ಮಿಯಾಂದಾದ್ ಹೇಳಿಕೆ ವೈರಲ್ ಆಗಿದೆ. ಅವರ ಈ ಹೇಳಿಕೆ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದೇನು ಆಹ್ವಾನವೋ, ಸಾವಿನ ಎಚ್ಚರಿಕೆಯೋ ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಯಾವುದಾದರೂ ಒಂದು ತಂಡವನ್ನು ತಮ್ಮ ದೇಶಕ್ಕೆ ಆಹ್ವಾನಿಸುವ ಪರಿ ಇದೇನಾ ಎಂದು ನೆಟ್ಟಿಗರು ಟೀಕಿಸಿದ್ದಾರೆ. ಒಂದು ವೇಳೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದೇ ಇದ್ದರೆ ಪಾಕಿಸ್ತಾನ ಜೊತೆಗೆ ಶ್ರೀಲಂಕಾ, ಯುಎಇನಲ್ಲೂ ಪಂದ್ಯಗಳು ನಡೆಯಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments