Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಉಪನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ರೋಹಿತ್ ಶರ್ಮಾರನ್ನು ವಿರಾಟ್ ಕೊಹ್ಲಿು ಡೆಪ್ಯುಟಿಯಾಗಿ ನೇಮಿಸಲಾಗಿತ್ತು. ಆದರೆ ರೋಹಿತ್ ಗಾಯಗೊಂಡಿದ್ದರಿಂದ ಅವರ ಸ್ಥಾನಕ್ಕೆ ರಾಹುಲ್ ರನ್ನು ಉಪನಾಯಕನಾಗಿ ನೇಮಿಸಲಾಗಿದೆ.
ಹೀಗಾಗಿ ಟೆಸ್ಟ್ ಸರಣಿಯಲ್ಲಿ ಅವರು ಆಡುವುದು ಖಚಿತವಾಗಿದೆ. ಏಕದಿನ ಸರಣಿಗೆ ಈಗಾಗಲೇ ರಾಹುಲ್ ರನ್ನು ಉಪ ನಾಯಕನಾಗಿ ನೇಮಿಸಲಾಗಿದೆ. ಈಗ ಟೆಸ್ಟ್ ಸರಣಿಗೂ ರೋಹಿತ್ ಅನುಪಸ್ಥಿತಿಯಲ್ಲಿ ಉಪನಾಯಕತ್ವದ ಹೊಣೆ ಹೊರಲಿದ್ದಾರೆ.