Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಭಾರತ ತಂಡದ ಆರಂಭಿಕರಾಗಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ಚರ್ಚೆ ಜೋರಾಗಿದೆ.
ಕೆಎಲ್ ರಾಹುಲ್ ಈಗ ಕೊಂಚ ನಿಧಾನಗತಿಯ ಬ್ಯಾಟಿಂಗ್ ಮಾಡಿರುವುದರಿಂದ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ರಾಹುಲ್ ಸ್ಥಾನಕ್ಕೆ ಇನ್ ಫಾರ್ಮ್ ಬ್ಯಾಟಿಗ ಶುಬ್ನಂ ಗಿಲ್ ಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
ಗಿಲ್ ಜಿಂಬಾಬ್ವೆ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ರಾಹುಲ್ ಮುಂದಿನ ಪಂದ್ಯಗಳಲ್ಲೂ ಇದೇ ರೀತಿ ಪ್ರದರ್ಶನ ಮುಂದುವರಿಸಿದರೆ ಶುಬ್ನಂ ಗಿಲ್ ಹೆಸರು ಮುನ್ನಲೆಗೆ ಬರಲಿದೆ.