Publish Date: Sat, 04 Sep 2021 (17:02 IST)
Updated Date: Sat, 04 Sep 2021 (17:03 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮ ಆರಂಭ ಪಡೆದ ಟೀಂ ಇಂಡಿಯಾ ಈಗ ಮೊದಲ ವಿಕೆಟ್ ಕಳೆದುಕೊಂಡಿದೆ.
46 ರನ್ ಗಳಿಸಿದ್ದ ಕೆಎಲ್ ರಾಹುಲ್ ಜೇಮ್ಸ್ ಆಂಡರ್ಸನ್ ಗೆ ವಿಕೆಟ್ ಒಪ್ಪಿಸಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿದ್ದು, ಇನ್ನೂ ಮೊದಲ ಇನಿಂಗ್ಸ್ ಹಿನ್ನಡೆ ದಾಟಲು 16 ರನ್ ಗಳಿಸಬೇಕಿದೆ. ರೋಹಿತ್ ಶರ್ಮಾ 36 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ನಿನ್ನೆ ವಿಕೆಟ್ ನಷ್ಟವಿಲ್ಲದೇ 46 ರನ್ ಗಳಿಸಿ ದಿನದಾಟ ಮುಗಿಸಿದ್ದ ಭಾರತ ಇಂದೂ ಆರಂಭದಲ್ಲಿ ಉತ್ತಮವಾಗಿಯೇ ಆಡಿದೆ. ಆದರೆ ದುರಾದೃಷ್ಟವಶಾತ್ ರಾಹುಲ್ ಔಟಾಗಿದ್ದಾರೆ.