ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ ಮೊದಲ ಇನಿಂಗ್ಸ್ ನಲ್ಲಿ 311 ರನ್ ಗಳಿಗೆ ಆಲೌಟ್ ಆಗಿದೆ.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗಿ ವಿಕೆಟ್ ನಷ್ಟವಿಲ್ಲದೇ ಕೇವಲ 5 ಓವರ್ ಗಳಲ್ಲಿ 43 ರನ್ ಗಳಿಸಿದೆ.
ವೀರೇಂದ್ರ ಸೆಹ್ವಾಗ್ ಟೀಂ ಇಂಡಿಯಾ ಆರಂಭಿಕರಾಗಿದ್ದಾಗ ಭಾರತಕ್ಕೆ ಇಂತಹ ಆರಂಭ ದೊರಕುತ್ತಿದ್ದುದು ಸಾಮಾನ್ಯವಾಗಿತ್ತು. ಇದೀಗ ಹಲವು ದಿನಗಳ ನಂತರ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ಏಕದಿನ ಶೈಲಿಯಲ್ಲಿ ಬ್ಯಾಟಿಂಗ್ ಆರಂಭಿಸಿದೆ.
ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ಪೃಥ್ವಿ ಶಾ 20 ಎಸೆತಗಳಲ್ಲಿ 25 ರನ್ ಗಳಿಸಿದರೆ, ಕೆಎಲ್ ರಾಹುಲ್ ಲಯದಲ್ಲಿರುವಂತೆ ಕಂಡುಬರುತ್ತಿದ್ದು, 18 ಎಸೆತಗಳಲ್ಲಿ 4 ರನ್ ಗಳಿಸಿದ್ದಾರೆ. ಯುವ ಪೃಥ್ವಿ ಶಾ ಈಗಾಗಲೇ ತಮ್ಮ 25 ರನ್ ಗಳ ಪೈಕಿ 4 ಬೌಂಡರಿ, 1 ಸಿಕ್ಸರ್ ಹೊಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.