Publish Date: Tue, 10 Jul 2018 (09:07 IST)
Updated Date: Tue, 10 Jul 2018 (09:08 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮೊನ್ನೆ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಶತಕ ಗಳಿಸಿದ್ದ ಪರಿಣಾಮ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.
ಐಸಿಸಿ ಬಿಡುಗಡೆಗೊಳಿಸಿರುವ ಲೇಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ರಾಹುಲ್ ಜೀವನ ಶ್ರೇಷ್ಠ ಮೂರನೇ ಸ್ಥಾನ ಪಡೆದಿದ್ದಾರೆ. ಮೊನ್ನೆಯ ಶತಕದಿಂದಾಗಿ ಒಂಭತ್ತು ಸ್ಥಾನ ಮೇಲೇರಿರುವ ರಾಹುಲ್ ಮೂರನೇ ಸ್ಥಾನ ಗಳಿಸಿದ್ದಾರೆ.
ನಾಯಕ ವಿರಾಟ್ ಕೊಹ್ಲಿ 12 ನೇ ಸ್ಥಾನದಲ್ಲಿದ್ದರೆ ಮೂರನೇ ಪಂದ್ಯದಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ 11 ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಏರಾನ್ ಪಿಂಚ್ ಅಗ್ರ ಸ್ಥಾನದಲ್ಲಿದ್ದಾರೆ. ಇನ್ನು ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರ ಸ್ಥಾನದಲ್ಲಿ ಮುಂದುವರಿದಿರೆ ಇಂಗ್ಲೆಂಡ್ ವಿರುದ್ಧ ಸರಣಿ ಜಯಗಳಿಸಿದ ಭಾರತ ದ್ವಿತೀಯ ಸ್ಥಾನದಲ್ಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.