Publish Date: Wed, 02 Aug 2023 (16:17 IST)
Updated Date: Wed, 02 Aug 2023 (16:19 IST)
ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ಬ್ಯಾಟಿಂಗ್ ಜೊತೆ ಕೀಪಿಂಗ್ ಅಭ್ಯಾಸವನ್ನೂ ಆರಂಭಿಸಿದ್ದಾರೆ.
ಸದ್ಯಕ್ಕೆ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ರಾಹುಲ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭ್ಯಾಸದ ವಿಡಿಯೋ ಹಂಚಿಕೊಂಡಿದ್ದಾರೆ.
ಕೆಎಲ್ ರಾಹುಲ್ ಇನ್ನೂ ಫಿಟ್ನೆಸ್ ಸಾಬೀತುಪಡಿಸಿಲ್ಲ. ಆದರೆ ಅವರೀಗ ಬ್ಯಾಟಿಂಗ್ ಜೊತೆ ಕೀಪಿಂಗ್ ಕೂಡಾ ಅಭ್ಯಾಸ ನಡೆಸುತ್ತಿರುವುದು ನೋಡಿದರೆ ಏಷ್ಯಾ ಕಪ್ ವೇಳೆಗೆ ಫಿಟ್ ಆಗಿ ತಂಡ ಕೂಡಿಕೊಳ್ಳುವುದರಲ್ಲಿ ಅನುಮಾನವಿಲ್ಲ.