ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಗ ಶ್ರೇಯಸ್ ಅಯ್ಯರ್ ಸಂಪೂರ್ಣ ಫಿಟ್ ಆಗಿದ್ದು, ಸೆಪ್ಟೆಂಬರ್ 2 ರಂದು ನಡೆಯಲಿರುವ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ತಂಡದ ಮೂಲಗಳಿಂದ ತಿಳಿದುಬಂದಿದೆ.
ಆದರೆ ಕೆಎಲ್ ರಾಹುಲ್ ಫಿಟ್ನೆಸ್ ಟೆಸ್ಟ್ ಗೊಳಗಾಗಲಿದ್ದಾರೆ. ಕ್ಯಾಂಡಿಯಲ್ಲಿ ರಾಹುಲ್ ಫಿಟ್ನೆಸ್ ಟೆಸ್ಟ್ ಗೊಳಗಾಗಲಿದ್ದಾರೆ. ಆ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾದರಷ್ಟೇ ಅವರು ಪಾಕ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ.