ಐಪಿಎಲ್ 2024 ಕ್ಕೆ ಕೆಎಲ್ ರಾಹುಲ್ ಕಮ್ ಬ್ಯಾಕ್

Krishnaveni K
ಸೋಮವಾರ, 4 ಮಾರ್ಚ್ 2024 (14:12 IST)
Photo Courtesy: Twitter
ಮುಂಬೈ: ತೊಡೆ ನೋವಿನಿಂದಾಗಿ ಸದ್ಯಕ್ಕೆ ಟೀಂ ಇಂಡಿಯಾದಿಂದ ಹೊರಗುಳಿದಿರುವ ಕ್ರಿಕೆಟಿಗ ಕೆಎಲ್ ರಾಹುಲ್ ಇದೇ ತಿಂಗಳ ಅಂತ್ಯಕ್ಕೆ ನಡೆಯಲಿರುವ ಐಪಿಎಲ್ ಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವಾಡಿದ ಬಳಿಕ ರಾಹುಲ್ ಗಾಯಗೊಂಡಿದ್ದರು. ಬಳಿಕ ಎಲ್ಲಾ ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಬೇಕಾಯಿತು. ಇದೀಗ ಬಿಸಿಸಿಐ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂಗ್ಲೆಂಡ್ ಕಳುಹಿಸಿದೆ. ಇಂಗ್ಲೆಂಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಹುಲ್ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಮೊದಲು ರಾಹುಲ್ ಐಪಿಎಲ್ ನ ಮೊದಲ ಭಾಗಗಳಿಗೆ ಅಲಭ್ಯರಾಗುವ ಸಾಧ‍್ಯತೆ ಇದೆ ಎನ್ನಲಾಗಿತ್ತು. ಆದರೆ ಈಗ ರಾಹುಲ್ ಫಿಟ್ನೆಸ್ ಮರಳಿ ಪಡೆಯುತ್ತಿರುವ ವೇಗ ಗಮನಿಸಿದರೆ ಅವರು ಐಪಿಎಲ್ ವೇಳೆಗೆ ಫಿಟ್ ಆಗಿ ತಂಡಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ.

ಮಾರ್ಚ್ 22 ರಿಂದ ಐಪಿಎಲ್ ಆರಂಭವಾಗಲಿದೆ. ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದಾರೆ. ಕಳೆದ ಬಾರಿಯೂ ಐಪಿಎಲ್ ವೇಳೆಗೆ ಗಾಯಗೊಂಡಿದ್ದ ರಾಹುಲ್ ಕೊನೆಯ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಸದ್ಯದಲ್ಲೇ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿರುವ ರಾಹುಲ್ ಫಿಟ್ನೆಸ್ ಸಾಬೀತುಪಡಿಸಲಿದ್ದಾರೆ. ಅದಾದ ಬಳಿಕ ಐಪಿಎಲ್ ಪಂದ್ಯಗಳಿಗೆ ಅವರು ಲಭ್ಯರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments