Publish Date: Fri, 12 Mar 2021 (10:27 IST)
Updated Date: Fri, 12 Mar 2021 (10:29 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆ ಮೂಲಕ ಆರಂಭಿಕ ಸ್ಥಾನಕ್ಕೆ ಶಿಖರ್ ಧವನ್-ರೋಹಿತ್ ಜೋಡಿಯೇ, ರಾಹುಲ್-ರೋಹಿತ್ ಜೋಡಿಯೇ ಎಂಬ ಅನುಮಾನಗಳಿಗೆ ತೆರೆ ಬಿದ್ದಿದೆ. ರಾಹುಲ್ ಆರಂಭಿಕರಾದರೆ ಶಿಖರ್ ಧವನ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ.
ಇನ್ನು, ಯುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಗೆ ಅವಕಾಶ ನೀಡುವ ಬಗ್ಗೆ ಕೊಹ್ಲಿ ಸುಳಿವು ನೀಡಿದ್ದಾರೆ. ವೇಗದ ಬೌಲರ್ ಭುವನೇಶ್ವರ್ ಕುಮಾರ್ ಫಿಟ್ ಆಗಿದ್ದು, ಅವರು ಕಮ್ ಬ್ಯಾಕ್ ಮಾಡಲಿದ್ದಾರೆ ಎಂದಿದ್ದಾರೆ. ಉಳಿದಂತೆ ತಂಡದ ಆಡುವ ಬಳಗದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಇಂಗ್ಲೆಂಡ್ ಟಿ20 ಕ್ರಿಕೆಟ್ ನಲ್ಲಿ ನಂ.1 ತಂಡವಾಗಿದ್ದು, ಅವರು ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.