Publish Date: Wed, 29 Sep 2021 (16:52 IST)
Updated Date: Wed, 29 Sep 2021 (16:54 IST)
ಮುಂಬೈ: ಐಪಿಎಲ್ 14 ರ ವೇಳೆ ಮಂಡಿ ನೋವಿಗೊಳಗಾಗಿದ್ದ ಕೋಲ್ಕೊತ್ತಾ ನೈಟ್ ರೈಡರ್ಸ್ ಸ್ಪಿನ್ನರ್ ಕುಲದೀಪ್ ಯಾದವ್ ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಮುಂಬೈನ ಆಸ್ಪತ್ರೆಯಲ್ಲಿ ನಿನ್ನೆ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಇದೀಗ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಫೋಟೋ ಹಂಚಿಕೊಂಡಿದ್ದು, ಯಶಸ್ವಿಯಾಗಿದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡ ಬಳಿಕವಷ್ಟೇ ಅವರು ಸಕ್ರಿಯ ಕ್ರಿಕೆಟ್ ಗೆ ಮರಳಬಹುದಾಗಿದೆ. ಅದಕ್ಕೆ ಕೆಲವು ಸಮಯ ಬೇಕಾಗಬಹುದು.