ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆಯಾಗುವುದು ಖಂಡಿತಾ.
ನಾಯಕ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರೆಹಾನೆ ನಾಯಕತ್ವದ ಹೊಣೆ ಹೊರಲಿದ್ದಾರೆ. ಪೃಥ್ವಿ ಶಾ ಬದಲಿಗೆ ಮಯಾಂಕ್ ಅಗರ್ವಾಲ್ ಜತೆಗೆ ಶಬ್ನಂ ಗಿಲ್ ಗೆ ಅವಕಾಶ ಸಿಗಲಿದೆ. ಇನ್ನು, ಕೊಹ್ಲಿ ಅನುಪಸ್ಥಿತಿಯಲ್ಲಿ ಅನುಭವಿ ಆಟಗಾರನ ಸ್ಥಾನ ತುಂಬಲು ಕೆಎಲ್ ರಾಹುಲ್ ಆಡುವ ಬಳಗ ಕೂಡಿಕೊಳ್ಳುವ ಸಾಧ‍್ಯತೆಯಿದೆ. ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸ್ಥಾನಕ್ಕೆ ರಿಷಬ್ ಪಂತ್ ಆಗಮನವಾಗುವ ಸಾಧ್ಯತೆಯಿದೆ. ಇನ್ನು, ತಂಡದಲ್ಲಿ ಆಲ್ ರೌಂಡರ್ ಕೊರತೆ ಕಾಡುತ್ತಿದ್ದು, ಹನುಮ ವಿಹಾರಿ ಬದಲಿಗೆ ರವೀಂದ್ರ ಜಡೇಜಾಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಈಗಾಗಲೇ ಸಾಕಷ್ಟು ಟೀಕೆಗೊಳಗಾಗಿರುವ ಟೀಂ ಇಂಡಿಯಾ ಈ ಪಂದ್ಯ ಗೆದ್ದು ಮಾನ ಉಳಿಸಿಕೊಳ್ಳಲೇಬೇಕಿದ್ದು, ಹೀಗಾಗಿ ಸಾಕಷ್ಟು ಬದಲಾವಣೆ ಖಂಡಿತಾ.