Publish Date: Sat, 12 Dec 2020 (10:28 IST)
Updated Date: Sat, 12 Dec 2020 (10:29 IST)
ಸಿಡ್ನಿ: ಆಸ್ಟ್ರೇಲಿಯಾ ಎ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಶಬ್ನಂ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಬ್ಯಾಟಿಂಗ್ ನಡೆಸಿದ್ದಾರೆ.
ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿದ್ದು, ಮೊದಲ ಇನಿಂಗ್ಸ್ ನ ಮುನ್ನಡೆಯೂ ಸೇರಿ ಒಟ್ಟು 174 ರನ್ ಗಳ ಮುನ್ನಡೆಯಲ್ಲಿದೆ. ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್ ಅತ್ಯುತ್ತಮ ಬ್ಯಾಟಿಂಗ್ ನಡೆಸಿದ್ದು, 59 ಎಸೆತಗಳಿಂದ 52 ರನ್ ಗಳಿಸಿ ಅಜೇಯರಾಗಿದ್ದಾರೆ. ಇವರಿಗೆ ತಕ್ಕ ಸಾಥ್ ಕೊಡುತ್ತಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ 28 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ಆಸೀಸ್ ಮೊದಲ ಇನಿಂಗ್ಸ್ ನಲ್ಲಿ 108 ಕ್ಕೆ ಆಲೌಟ್ ಆಗಿತ್ತು. ಭಾರತ ಮೊದಲ ಇನಿಂಗ್ಸ್ ನಲ್ಲಿ 194 ರನ್ ಗಳಿಸಿತ್ತು.