Publish Date: Sun, 04 Jul 2021 (11:01 IST)
Updated Date: Sun, 04 Jul 2021 (10:08 IST)
ಲಂಡನ್: ಇಂಗ್ಲೆಂಡ್ ನಲ್ಲಿ ಏಕದಿನ ಸರಣಿ ಆಡುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಬ್ಯಾಟ್ಸ್ ಮನ್ ಮಿಥಾಲಿ ರಾಜ್ ನಿನ್ನೆಯ ಪಂದ್ಯದಲ್ಲಿ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ.
ಮೊದಲ ಪಂದ್ಯದಲ್ಲಿ 72 ಮತ್ತು ನಿನ್ನೆಯ ಪಂದ್ಯದಲ್ಲಿ 59 ರನ್ ಗಳಿಸಿದ ಮಿಥಾಲಿ ರಾಜ್ ಇಂಗ್ಲೆಂಡ್ ನೆಲದಲ್ಲಿ 14 ಕ್ಕೂ ಹೆಚ್ಚು ಬಾರಿ 50 ಪ್ಲಸ್ ರನ್ ಗಳಿಸಿದ ದಾಖಲೆ ಮಾಡಿದರು. ಈ ಮೂಲಕ ಪುರುಷರ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕೂಡಾ ಮಾಡದ ದಾಖಲೆಯನ್ನು ಮಾಡಿದ್ದಾರೆ.
ನಿನ್ನೆಯ ಪಂದ್ಯವನ್ನು ಭಾರತದ ವನಿತೆಯರು 4 ವಿಕೆಟ್ ಗಳಿಂದ ಗೆದ್ದುಕೊಂಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 219 ರನ್ ಗಳಿಗೆ ಆಲೌಟ್ ಆಗಿತ್ತು. ಭಾರತ 6 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಪಂದ್ಯ ಗೆದ್ದುಕೊಂಡಿದೆ.