Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಕ್ರಿಕೆಟಿಗ ಅಜರುದ್ದೀನ್​ಗೆ ಇಡಿ ನೋಟಿಸ್​

ಅಕ್ರಮ ಹಣ ವರ್ಗಾವಣೆ  ಪ್ರಕರಣ: ಮಾಜಿ ಕ್ರಿಕೆಟಿಗ ಅಜರುದ್ದೀನ್​ಗೆ ಇಡಿ ನೋಟಿಸ್​

Sampriya

ಹೈದರಾಬಾದ್ , ಗುರುವಾರ, 3 ಅಕ್ಟೋಬರ್ 2024 (14:19 IST)
Photo Courtesy X
ಹೈದರಾಬಾದ್​: ಅಕ್ರಮ ಹಣ ವರ್ಗಾವಣೆ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್​ ನಾಯಕ ಮೊಹಮ್ಮದ್​ ಅಜರುದ್ದೀನ್​ಗೆ ಜಾರಿ ನಿರ್ದೇಶನಾಲಯ ನೋಟಿಸ್​ ಜಾರಿ ಮಾಡಿದೆ.

ಅಕ್ಟೋಬರ್​ 3ರಂದು ಹೈದರಾಬಾದಿನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ,

ಹೈದರಾಬಾದ್​ ಕ್ರಿಕೆಟ್​ ಅಸೋಸಿಯೇಷನ್​ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ  ಪ್ರಕರಣಕ್ಕೆ ಸಂಬಂಧ ಕಳೆದ ವರ್ಷ ನವೆಂಬರ್​ನಲ್ಲಿ ಅಜರುದ್ದೀನ್​ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಹೈದರಾಬಾದ್‌ ಕ್ರಿಕೆಟ್ ಅಸೋಶಿಯೇಷನ್‌ನಲ್ಲಿ ನಡೆದಿದೆ ಎನ್ನಲಾದ ₹ 20 ಕೋಟಿ ಅಕ್ರಮ ಹಣ ವರ್ಗಾವಣೆಗೆ​ ಸಂಬಂಧಿಸಿದಂತೆ ತೆಲಂಗಾಣದ ಎಸಿಬಿ ದಾಖಲಿಸಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ಪ್ರಕರಣ ದಾಖಲು ಮಾಡಿಕೊಂಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂಗಳ ಹತ್ಯೆಗೈದ ಬಾಂಗ್ಲಾದೇಶ ಕ್ರಿಕೆಟಿಗನ ಬ್ಯಾಟ್ ಉತ್ಪನ್ನಕ್ಕೆ ಪ್ರಚಾರ: ರೋಹಿತ್ ಶರ್ಮಾ, ಕೊಹ್ಲಿ ಮೇಲೆ ಸಿಟ್ಟು