ಮುಂಬೈ: ಕಳೆದ ಮೂರು ವರ್ಷಗಳಿಂದ ರನ್ ಬರಗಾಲ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಈಗ ಮತ್ತೆ ಫಾರ್ಮ್ ಗೆ ಮರಳಲು ಪ್ರಯತ್ನಿಸುತ್ತಿದ್ದು, ತಂಡಕ್ಕಾಗಿ ಮುಂಬರುವ ವಿಶ್ವಕಪ್, ಟಿ20 ವಿಶ್ವಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ ಎಂದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಕೊಹ್ಲಿ ತಮ್ಮ ಭವಿಷ್ಯದ ಕನಸಿನ ಬಗ್ಗೆ ಮಾತನಾಡಿದ್ದಾರೆ. ನನ್ನ ಮುಂದಿನ ಗುರಿ ಎಂದರೆ ಏಷ್ಯಾ ಕಪ್, ಟಿ20 ವಿಶ್ವಕಪ್ ಗೆಲ್ಲಿಸಿಕೊಡುವುದು. ತಂಡಕ್ಕಾಗಿ ಏನೇ ಮಾಡಲೂ ರೆಡಿ ಎಂದಿದ್ದಾರೆ.
ಸದ್ಯಕ್ಕೆ ವೆಸ್ಟ್ ಇಂಡೀಸ್ ಸರಣಿಯಿಂದ ಹೊರಗುಳಿದಿರುವ ಕೊಹ್ಲಿ ಮುಂಬರುವ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸರಣಿಯಲ್ಲಿ ಅವರು ಮರಳಿ ಫಾರ್ಮ್ ಗೆ ಮರಳಬಹುದು ಎಂಬ ವಿಶ್ವಾಸದಲ್ಲಿದ್ದಾರೆ.