ಮುಂಬೈ: ಚಾಂಪಿಯನ್ಸ್ ಟ್ರೋಫಿ ಮುಗಿದ ತಕ್ಷಣ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಕಿರು ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಇನ್ ಫಾರ್ಮ್ ಬ್ಯಾಟ್ಸ್ ಮನ್ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ.
ರೋಹಿತ್ ಬದಲಿಗೆ ಆರಂಭಿಕ ಸ್ಥಾನಕ್ಕೆ ರಿಷಬ್ ಪಂತ್ ರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ವೇಗಿ ಜಸ್ಪ್ರೀತ್ ಬುಮ್ರಾಗೂ ವಿಶ್ರಾಂತಿ ನೀಡಲಾಗಿದೆ. ಇವರಿಬ್ಬರೂ ಐಪಿಎಲ್ ಮತ್ತು ಚಾಂಪಿಯನ್ಸ್ ಟ್ರೋಫಿ ಸೇರಿದಂತೆ ಸತತ ಕ್ರಿಕೆಟ್ ನಿಂದ ಬಳಲಿರುವುದರಿಂದ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ.
ಪಂತ್ ಅಲ್ಲದೆ, ಯುವ ಸ್ಪಿನ್ನರ್ ಕುಲದೀಪ್ ಯಾದವ್ ಗೂ ಸ್ಥಾನ ಕಲ್ಪಿಸಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಯಾದವ್ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದರು.