ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 3 ವಿಕೆಟ್ ಗೆ 276 ರನ್ ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಭಾರತ ಭೋಜನ ವಿರಾಮದ ವೇಳೆಗೆ 7 ವಿಕೆಟ್ ಕಳೆದುಕೊಂಡು 346 ರನ್ ಗಳಿಸಿದೆ.
ಇಂಗ್ಲೆಂಡ್ ಬೌಲರ್ ಗಳು ನೀಡಿದ ತಿರುಗೇಟಿನಿಂದ ಶತಕ ಬಾರಿಸಿದ್ದ ಕೆಎಲ್ ರಾಹುಲ್ ಬೇಗನೇ ನಿರ್ಗಮಿಸಿದರೆ, ಅಜಿಂಕ್ಯ ರಹಾನೆ (1) ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್ ಗೆ ಹೆಜ್ಜೆ ಹಾಕಿದರು.
ಕೆಳ ಕ್ರಮಾಂಕದಲ್ಲಿ ರಿಷಭ್ ಪಂತ್ 58 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 37 ರನ್ ಬಾರಿಸಿ ಔಟಾದರೆ, ರವೀಂದ್ರ ಜಡೇಜಾ 86 ಎಸೆತಗಳಲ್ಲಿ 3 ಬೌಂಡರಿ ಸಹಾಯದಿಂದ 31 ರನ್ ಗಳಿಸಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.
ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ 3 ವಿಕೆಟ್ ಪಡೆದರೆ, ಓಲಿ ರಾಬಿನ್ಸನ್ 2 ಮತ್ತು ಮೊಯಿನ್ ಅಲಿ 1 ವಿಕೆಟ್ ಗಳಿಸಿದರು.