Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹರ್ಲಿನ್ ಡಿಯೋಲ್ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಿಡಿದ ಫ್ಲೈಯಿಂಗ್ ಕ್ಯಾಚ್ ಈಗ ಭಾರೀ ಸದ್ದು ಮಾಡುತ್ತಿದೆ.
ಹರ್ಲಿನ್ ರ ಈ ಅದ್ಭುತ ಕ್ಯಾಚ್ ಗೆ ಈಗ ಪ್ರಧಾನಿ ಮೋದಿಯಿಂದ ಹಿಡಿದು ಜನನಾಯಕರು, ಕ್ರಿಕೆಟಿಗರು, ಸೆಲೆಬ್ರಿಟಿಗಳು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ತಂಡ ಸೋತರೂ ಹರ್ಲಿನ್ ಬೌಂಡರಿ ಗೆರೆ ಬಳಿ ನಿಂತು ಹಾರಿ ಹಿಡಿದ ಕ್ಯಾಚ್ ಈಗ ಮನೆ ಮಾತಾಗಿದೆ. ಮಹಿಳಾ ಆಟಗಾರ್ತಿಯ ಸಾಹಸವನ್ನು ಕೊಂಡಾಡಿರುವ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.