ಪರ್ತ್: ಟಿ20 ವಿಶ್ವಕಪ್ ಗೆ ಸಿದ್ಧತೆ ನಡೆಸುತ್ತಿರುವ ಟೀಂ ಇಂಡಿಯಾ ಸ್ಟಾರ್ ಬ್ಯಾಟಿಗ ವಿರಾಟ್ ಕೊಹ್ಲಿಗೆ ಸ್ವತಃ ಕೋಚ್ ರಾಹುಲ್ ದ್ರಾವಿಡ್ ಸಾಥ್ ನೀಡುತ್ತಿದ್ದಾರೆ.
ಕೊಹ್ಲಿ ಅಭ್ಯಾಸ ಪಂದ್ಯದಿಂದ ಹೊರಗುಳಿದಿದ್ದರು. ಆದರೆ ಸುಮ್ಮನೇ ಕೂರದೇ ಕಠಿಣ ಬ್ಯಾಟಿಂಗ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರು.
ಈ ವೇಳೆ ಕೊಹ್ಲಿಗೆ ಸಹಾಯ ಮಾಡಲು ಸ್ವತಃ ಕೋಚ್ ರಾಹುಲ್ ದ್ರಾವಿಡ್ ಥ್ರೋ ಡೌನ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸಿದರು. ಈ ವೇಳೆ ದ್ರಾವಿಡ್ ಕೊಹ್ಲಿಗೆ ಪದೇ ಪದೇ ಕೆಲವು ಸಲಹೆಗಳನ್ನೂ ನೀಡುತ್ತಿದ್ದರು. ಅಭ್ಯಾಸ ಪಂದ್ಯದ ಬಳಿಕ ಕೆಎಲ್ ರಾಹುಲ್ ಕೂಡಾ ಕೊಹ್ಲಿಗೆ ಜೊತೆಯಾದರು.
-Edited by Rajesh Patil