ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಈಗ ಮೊದಲ ಟೆಸ್ಟ್ ಪಂದ್ಯಕ್ಕೆ ಅಂತಿಮ ತಂಡವನ್ನು ಕಣಕ್ಕಿಳಿಸುವುದು ದೊಡ್ಡ ಸವಾಲಾಗಿದೆ.
ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆರಂಭಿಕರಾಗಿ ಶ್ರೀಕರ್ ಭರತ್-ಶುಬ್ನಂ ಗಿಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.
ಆದರೆ ನೆಟ್ ಪ್ರಾಕ್ಟೀಸ್ ವೇಳೆ ಹಿರಿಯ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್-ರವೀಂದ್ರ ಜಡೇಜಾ ಇಬ್ಬರೂ ಅತ್ಯುತ್ತಮವಾಗಿ ಬೌಲಿಂಗ್ ಮಾಡುತ್ತಿರುವ ಕೋಚ್ ದ್ರಾವಿಡ್ ತಲೆನೋವು ಹೆಚ್ಚಿಸಿದೆ. ಈ ಇಬ್ಬರೂ ಟೆಸ್ಟ್ ಕ್ರಿಕೆಟ್ ನಲ್ಲಿ ತಂಡಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇಬ್ಬರೂ ಆಲ್ ರೌಂಡರ್ ಗಳೇ. ಆದರೆ ಇಂಗ್ಲೆಂಡ್ ನ ವೇಗದ ಪಿಚ್ ನಲ್ಲಿ ಇಬ್ಬರನ್ನು ಸ್ಪಿನ್ನರ್ ಗಳನ್ನು ಆಡಿಸುವ ರಿಸ್ಕ್ ತೆಗೆದುಕೊಳ್ಳುವುದು ಸುಲಭವಲ್ಲ. ಹೀಗಾಗಿ ದ್ರಾವಿಡ್ ಗೆ ಈಗ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ತಲೆನೋವು ಶುರುವಾಗಿದೆ.