Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಭಾರತೀಯ ಕ್ರಿಕೆಟ್ ನ ವಾಲ್ ರಾಹುಲ್ ದ್ರಾವಿಡ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರುಗಳನ್ನು ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಿಗೆ ಬಿಸಿಸಿಐ ನಾಮನಿರ್ದೇಶನ ಮಾಡಿದೆ.
ಭಾರತ ಎ ತಂಡದ ಕೋಚ್ ಆಗಿ ವಿಶ್ವಕಪ್ ಯಶಸ್ಸು ತಂದುಕೊಟ್ಟ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಮತ್ತು ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.
ಇನ್ನು, ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಗೆ ಧ್ಯಾನ್ ಚಂದ್ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡುವಂತೆ ಹೆಸರು ಶಿಫಾರಸ್ಸು ಮಾಡಲಾಗಿದೆ. ಕೊಹ್ಲಿ ಹೆಸರನ್ನು ಇದು ಎರಡನೇ ಬಾರಿಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗುತ್ತಿದೆ.
ವಿಶೇಷವೆಂದರೆ ಕೆಲವು ವರ್ಷಗಳ ಸಂಪ್ರದಾಯ ಮೀರಿ ಬಿಸಿಸಿಐ ರಾಹುಲ್ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡುತ್ತಿದೆ. ಇದು ದ್ರಾವಿಡ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.