Publish Date: Thu, 27 Jul 2023 (09:43 IST)
Updated Date: Thu, 27 Jul 2023 (09:55 IST)
ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.
ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಮೊದಲ ಪಂದ್ಯ ಬಾರ್ಬಡೋಸ್ ನಲ್ಲಿ ನಡೆಯುತ್ತಿದೆ. ಆದರೆ ಇಂದು ಇಲ್ಲಿ ಮಳೆಯಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ.
ವೆಸ್ಟ್ ಇಂಡೀಸ್ ನಲ್ಲಿ ಈಗಾಗಲೇ ಮಾನ್ಸೂನ್ ಶುರುವಾಗಿದೆ. ಎರಡನೇ ಟೆಸ್ಟ್ ಪಂದ್ಯದ ವೇಳೆ ಮಳೆ ಕಾಟದಿಂದಾಗಿ ಪಂದ್ಯ ಕೊನೆಯ ದಿನ ರದ್ದಾಗಿ ಡ್ರಾನಲ್ಲಿ ಅಂತ್ಯವಾಗಿತ್ತು. ಇದೀಗ ಏಕದಿನ ಪಂದ್ಯಕ್ಕೂ ಮಳೆ ಕಾಟ ಎದುರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.