Publish Date: Sun, 22 Sep 2019 (17:48 IST)
Updated Date: Mon, 23 Sep 2019 (14:57 IST)
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಕೆಲವೇ ಕ್ಷಣಗಳಲ್ಲಿ ತೃತೀಯ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಅಂಗಣದಲ್ಲಿ ಪ್ರಾರಂಭವಾಗಲಿದೆ.
ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಎಲ್ಲಾ ಲಕ್ಷಣಗಳಿವೆ. ನಿನ್ನೆ ರಾತ್ರಿಯಿಡೀ ಮಳೆ ಸುರಿದಿದ್ದು, ಇಂದೂ ಕೂಡಾ ದಟ್ಟ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಇಂದೂ ಮಳೆಯಾಗುವ ಎಲ್ಲಾ ಸೂಚನೆಯಿದೆ.
ಇದರಿಂದಾಗಿ ಪಂದ್ಯ ನಡೆಯುವುದು ಡೌಟ್ ಆಗಿದೆ. ಈಗಾಗಲೇ ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯ ಸಂಪೂರ್ಣವಾಗಿ ಮಳೆಯಿಂದ ರದ್ದಾಗಿತ್ತು. ದ್ವಿತೀಯ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು. ಇಂದು ಬೆಂಗಳೂರಿನ ಪಂದ್ಯಕ್ಕೆ ಸಾಕಷ್ಟು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಮಳೆ ಅಡ್ಡಿಯಾಗದಿದ್ದರೆ ಸಾಕು ಎಂದು ಪ್ರಾರ್ಥಿಸುವಂತಾಗಿದೆ.