ಬೆಂಗಳೂರು: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ಫೈನಲ್ ತಲುಪಿ ಬೆಳ್ಳಿ ಪದಕ ಗೆದ್ದುಕೊಂಡು ಸ್ಪಿನ್ನರ್ ರಾಜೇಶ್ವರಿ ಗಾಯಕ್ ವಾಡ್ ಗೆ ರಾಜ್ಯ ಸರ್ಕಾರದ ವತಿಯಿಂದ 15 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೇವಲ 9 ರನ್ ಗಳಿಂದ ಸೋತಿತ್ತು. ಈ ತಂಡದ ಭಾಗವಾಗಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ ವಾಡ್ ಗೆ ರಾಜ್ಯ ಸರ್ಕಾರದ ವತಿಯಿಂದ 15 ಲಕ್ಷ ರೂ. ಬಹುಮಾನ ನೀಡುವುದಾಗಿ ಕ್ರೀಡಾ ಸಚಿವ ಡಾ.ನಾರಾಯಣ ಗೌಡ ಹೇಳಿದ್ದಾರೆ.