ವಡೋದರಾ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಎದುರು ಕರ್ನಾಟಕ ತಂಡ ಒಟ್ಟಾರೆ 199 ರನ್ ಮುನ್ನಡೆ ಸಾಧಿಸಿದೆ. ಇನ್ನೂ ಎರಡು ದಿನದ ಆಟ ಬಾಕಿಯಿದ್ದು, ಕರ್ನಾಟಕಕ್ಕೆ ಮತ್ತೊಂದು ಗೆಲುವಿನ ಆಸೆ ಚಿಗುರೊಡೆದಿದೆ.
ಎರಡನೇ ದಿನದ ಅಂತ್ಯಕ್ಕೆ ಕರ್ನಾಟಕ ಮೂರು ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. ಆರ್ ಸಮರ್ಥ್ (45 ರನ್) ಮತ್ತು ಸ್ಟುವರ್ಟ್ ಬಿನ್ನಿ (12) ಕ್ರೀಸ್ ನಲ್ಲಿದ್ದಾರೆ. ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 267 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ವಿದರ್ಭ ತಂಡ ಮೊದಲ ಇನಿಂಗ್ಸ್ ನಲ್ಲಿ 176 ಕ್ಕೆ ಆಲೌಟ್ ಆಗಿತ್ತು. ಇದರೊಂದಿಗೆ ರಾಜ್ಯ ತಂಡ ಅಲ್ಪ ಮೊತ್ತದ ಮುನ್ನಡೆ ಪಡೆದಿತ್ತು.
ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ ತನ್ನ ಮುನ್ನಡೆಯನ್ನು 199 ಕ್ಕೇರಿಸಿದೆ. ಕರ್ನಾಟಕಕ್ಕೆ ಈ ಪಂದ್ಯದಲ್ಲಿ ಖಾಯಂ ನಾಯಕ ವಿನಯ್ ಕುಮಾರ್ ವಾಪಸ್ ಆಗಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಿಗಾಗಿ ಟೀಂ ಇಂಡಿಯಾ ಪರ ಆಡಲಿರುವುದರಿಂದ ಈ ಪಂದ್ಯದಲ್ಲಿ ರಾಜ್ಯ ತಂಡಕ್ಕೆ ಅವರ ಅನುಪಸ್ಥಿತಿ ಕಾಡುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ