ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗರಿಗೆ ಯೋ ಯೋ ಟೆಸ್ಟ್ ನಡೆಸುತ್ತಿರುವ ಬಗ್ಗೆ ಕೋಚ್ ರವಿಶಾಸ್ತ್ರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅಫ್ಘಾನಿಸ್ತಾನ ಟೆಸ್ಟ್ ಪಂದ್ಯಕ್ಕೆ ಮೊದಲು ನಡೆದ ಯೋ ಯೋ ಫಿಟ್ ನೆಸ್ ಟೆಸ್ಟ್ ನಲ್ಲಿ ಕೆಲವು ಆಟಗಾರರು ಫಿಟ್ನೆಸ್ ಸಾಬೀತುಪಡಿಸಲು ವಿಫಲರಾಗಿ ತಂಡದಿಂದ ಕೊಕ್ ಪಡೆದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ ‘ಟೀಂ ಇಂಡಿಯಾದಲ್ಲಿ ಆಡಬೇಕಾದರೆ ದೈಹಿಕ ಮತ್ತು ಮಾನಸಿಕವಾಗಿ 100 ಶೇಕಡಾ ಫಿಟ್ ಆಗಿರಬೇಕು. ಅನ್ ಫಿಟ್ ಆದ ಆಟಗಾರರಿಗೆ ತಂಡದಲ್ಲಿ ಸ್ಥಾನವಿಲ್ಲ’ ಎಂದಿದ್ದಾರೆ. ಮೊಹಮ್ಮದ್ ಶಮಿ ಯೋ ಯೋ ಟೆಸ್ಟ್ ನಲ್ಲಿ ವಿಫಲರಾದ ಕಾರಣ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ತಂಡದಿಂದ ಹೊರಗುಳಿದಿದ್ದರು. ಈ ಹಿನ್ನಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.