ಮುಂಬೈ: ಟೀಂ ಇಂಡಿಯಾ ಟಿ20 ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ವಿರಾಟ್ ಕೊಹ್ಲಿ ಮುಂದಿನ ದಿನಗಳಲ್ಲಿ ಏಕದಿನ ಮತ್ತು ಟೆಸ್ಟ್ ನಾಯಕತ್ವವನ್ನೂ ತ್ಯಜಿಸುತ್ತಾರೆ ಎಂಬ ಸುದ್ದಿಗಳಿವೆ. ಈ ಬಗ್ಗೆ ಮಾಜಿ ಕೋಚ್ ರವಿಶಾಸ್ತ್ರಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಕೊಹ್ಲಿ ಮುಂದಿನ ದಿನಗಳಲ್ಲಿ ಏಕದಿನ ಮತ್ತು ಟೆಸ್ಟ್ ನಾಯಕತ್ವವನ್ನೂ ತ್ಯಜಿಸಬಹುದು. ಕೇವಲ ತಮ್ಮ ಬ್ಯಾಟಿಂಗ್ ಬಗ್ಗೆ ಗಮನ ಕೊಡಬಹುದು ಎಂದು ಶಾಸ್ತ್ರಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಅವರು ಟೆಸ್ಟ್ ನಾಯಕತ್ವವನ್ನು ತಕ್ಷಣವೇ ತ್ಯಜಿಸಬಹುದು ಎಂದು ಹೇಳಲಾಗದು. ಆದರೆ ಸದ್ಯದಲ್ಲೇ ಅವರು ಮಾನಸಿಕವಾಗಿ ಬಳಲಿದಾಗ ತಮ್ಮ ಬ್ಯಾಟಿಂಗ್ ಸುಧಾರಿಸಲು ಈ ನಿರ್ಧಾರಕ್ಕೆ ಬರಬಹುದು ಎಂದು ಶಾಸ್ತ್ರಿ ಹೇಳಿದ್ದಾರೆ.