ಡೊಮಿನಿಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನಿಂಗ್ಸ್ ಮತ್ತು 141 ರನ್ ಗಳ ಭಾರೀ ಅಂತರದಿಂದ ಗೆದ್ದುಕೊಂಡಿದೆ.
ಮೊದಲ ಇನಿಂಗ್ಸ್ ನಲ್ಲಿ ವಿಂಡೀಸ್ 150 ರನ್ ಗಳಿಗೆ ಆಲೌಟ್ ಆಗಿತ್ತು. ಈ ಇನಿಂಗ್ಸ್ ನಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಪಡೆದಿದ್ದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಭಾರತದ ಪರ ಯಶಸ್ವಿ ಜೈಸ್ವಾಲ್ 171, ರೋಹಿತ್ ಶರ್ಮಾ 103, ವಿರಾಟ್ ಕೊಹ್ಲಿ 76 ರನ್, ರವೀಂದ್ರ ಜಡೇಜಾ ಅಜೇಯ 37 ರನ್ ಗಳಿಸಿದರು.
271 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ವಿಂಡೀಸ್ ಎರಡನೇ ಇನಿಂಗ್ಸ್ ನಲ್ಲಿ ರವಿಚಂದ್ರನ್ ಅಶ್ವಿನ್ ಮಾರಕ ದಾಳಿಯಿಂದಾಗಿ ಕೇವಲ 130 ರನ್ ಗಳಿಗೆ ಆಲೌಟ್ ಆಯಿತು. ಅಶ್ವಿನ್ ಈ ಇನಿಂಗ್ಸ್ ನಲ್ಲಿ 7 ವಿಕೆಟ್ ಕಬಳಿಸಿದರು. ಇನ್ನು, ಎರಡು ವಿಕೆಟ್ ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ 1 ವಿಕೆಟ್ ತಮ್ಮದಾಗಿಸಿಕೊಂಡರು. ಇದರೊಂದಿಗೆ ಟೀಂ ಇಂಡಿಯಾ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ 12 ಅಂಕ ಸಂಪಾದಿಸಿತು.