ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನವಾಗಿರುವ ಇಂದು ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿಶ್ವದಾಖಲೆಯೊಂದನ್ನು ಬರೆಯಲು ಸಜ್ಜಾಗಿದ್ದಾರೆ.
ಮೊದಲ ಇನಿಂಗ್ಸ್ ನಲ್ಲಿ ದ.ಆಫ್ರಿಕಾದ 7 ವಿಕೆಟ್ ಕಬಳಿಸಿದ್ದ ಅಶ್ವಿನ್ ಇಂದು ದ್ವಿತೀಯ ಇನಿಂಗ್ಸ್ ನಲ್ಲಿ ಒಂದೇ ಒಂದು ವಿಕೆಟ್ ಪಡೆದರೂ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ದಾಖಲೆಯೊಂದನ್ನು ಸರಿಗಟ್ಟಲಿದ್ದಾರೆ.
ಇದೀಗ ಟೆಸ್ಟ್ ಕ್ರಿಕೆಟ್ ನಲ್ಲಿ 349 ವಿಕೆಟ್ ಕಬಳಿಸಿರುವ ಅಶ್ವಿನ್ ಇನ್ನು ಒಂದು ವಿಕೆಟ್ ಪಡೆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾದಿ 350 ವಿಕೆಟ್ ಕಬಳಿಸಿದ ಮುರಳೀಧರನ್ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಇಬ್ಬರೂ 66 ಪಂದ್ಯಗಳಿಂದ ಈ ದಾಖಲೆ ಮಾಡಿದಂತಾಗುತ್ತದೆ.