Webdunia - Bharat's app for daily news and videos

Install App

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಇದುವೇ ಕಾರಣ

Webdunia
ಸೋಮವಾರ, 5 ಸೆಪ್ಟಂಬರ್ 2022 (08:00 IST)
ದುಬೈ: ಏಷ್ಯಾ ಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಮಾಡಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಪಾಕ್ ಮೊಹಮ್ಮದ್ ರಿಜ್ವಾನ್ ಅಬ್ಬರದ ಅರ್ಧಶತಕ (71), ಮೊಹಮ್ಮದ್ ನವಾಜ್ ಸ್ಪೋಟಕ ಬ್ಯಾಟಿಂಗ್ (42) ನಿಂದಾಗಿ ಒಂದು ಎಸೆತ ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಗೆದ್ದು ಬೀಗಿತು. ಇದರೊಂದಿಗೆ ಮೊನ್ನೆಯ ಸೋಲಿಗೆ ಸೇಡು ತೀರಿಸಿಕೊಂಡಿತು.

ಈ ಸೋಲಿಗೆ ಕಾರಣವಾಗಿದ್ದು ಭಾರತದ ಮಧ‍್ಯಮ ಕ್ರಮಾಂಕದ ಬ್ಯಾಟಿಗರು ಮತ್ತು ಲೀಡಿಂಗ್ ಬೌಲರ್ ಗಳು. ಕಳೆದ ಪಂದ್ಯದ ಹೀರೋ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ನಲ್ಲಿ ಶೂನ್ಯ ಸಂಪಾದಿಸಿದರೆ ಬೌಲಿಂಗ್ ನಲ್ಲಿ 4 ಓವರ್ ಗಳಲ್ಲಿ ಕೇವಲ 1 ವಿಕೆಟ್ ಕಬಳಿಸಿ 44 ರನ್ ಬಿಟ್ಟುಕೊಟ್ಟರು. ತಂಡದ ವೇಗದ ಬೌಲಿಂಗ್ ನ ಅನುಭವಿ ಎನಿಸಿಕೊಂಡ ಭುವನೇಶ್ವರ್ ಕುಮಾರ್ 4 ಓವರ್ ಗಳಲ್ಲಿ 40 ರನ್ ನೀಡಿದರು. ಅದರಲ್ಲೂ 19 ನೇ ಓವರ್ ನಲ್ಲಿ 19 ರನ್ ಬಿಟ್ಟುಕೊಟ್ಟರು.  ಯಜುವೇಂದ್ರ ಚಾಹಲ್ 4 ಓವರ್ ಗಳಲ್ಲಿ ಬಿಟ್ಟುಕೊಟ್ಟಿದ್ದು 43 ರನ್! ಇದ್ದವರಲ್ಲಿ ಅರ್ಷ್ ದೀಪ್ ಸಿಂಗ್ ಪರವಾಗಿಲ್ಲ. 3.5 ಓವರ್ ಗಳಲ್ಲಿ ಅವರು ನೀಡಿದ್ದು 27 ರನ್. ಆದರೆ 18 ನೇ ಓವರ್ ನಲ್ಲಿ ಕ್ಯಾಚ್ ಬಿಟ್ಟು ಅದನ್ನೂ ಮಣ್ಣುಪಾಲು ಮಾಡಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments